Thursday, May 2, 2024
HomeUncategorizedಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಚಿವ ಅಶ್ವತ್ ನಾರಾಯಣ್ ವಿರುದ್ಧ ಎಫ್‌ಐಆರ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಚಿವ ಅಶ್ವತ್ ನಾರಾಯಣ್ ವಿರುದ್ಧ ಎಫ್‌ಐಆರ್

spot_img
- Advertisement -
- Advertisement -

ಮಂಡ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಸಚಿವ ಅಶ್ವತ್ ನಾರಾಯಣ್ ಮತ್ತು ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ವಿರುದ್ಧ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಚಿವರಿಬ್ಬರು ಮಂಡ್ಯದ ಮಹಿಳಾ ಕಾಲೇಜು ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಇದರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಪ್ರಕರಣವನ್ನು ಮುಕ್ತವಾಗಿ ತನಿಖೆ ನಡೆಸಲು ನಮಗೆ ಅಧಿಕಾರವಿಲ್ಲ, ನ್ಯಾಯಾಲಯದಿಂದ ಆದೇಶ ತಂದರೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದರು.

ಸರ್ಕಾರಿ ಕಾಲೇಜುಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಈ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸುವಂತೆ ಚುನಾವಣಾ ಆಧಿಕಾರಿಯು 2ನೇ ACJ ಮತ್ತು JMFC ನ್ಯಾಯಾಲಯದ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆ ಪೂರ್ವ ಠಾಣೆ ಅಪರಾಧ ವಿಭಾಗದ ಪಿಎಸ್‌ಐ ಕೆ.ಎನ್. ಕೇಶವಮೂರ್ತಿ ಅವರು ಅಶ್ವತ್ಥ ನಾರಾಯಣ್ ಮತ್ತು ಮೈ.ವಿ.ರವಿಶಂಕರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

- Advertisement -
spot_img

Latest News

error: Content is protected !!