Friday, June 5, 2026
Homeತಾಜಾ ಸುದ್ದಿಬೆಂಗಳೂರು: ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ವಿರುದ್ಧ ಎಫ್ ಐ...

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ವಿರುದ್ಧ ಎಫ್ ಐ ಆರ್

- Advertisement -
- Advertisement -

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆಪ್ತ ಸ್ನೇಹಿತರಾದ ಬಿಗ್ ಬಾಸ್ ಸೀಸನ್ 10 ರ ಸ್ಪರ್ಧಿ ವಿನಯ್ ಗೌಡ ಹಾಗೂ ಬಿಗ್ ಬಾಸ್ ಸೀಸನ್  11ರ ಸ್ವರ್ಧಿಯಾದ ರಜತ್ ಕಿಶನ್ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ .ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ರೀಲ್ಸ್ ಒಂದನ್ನು ಮಾಡಿದ್ದು ಅದರಲ್ಲಿ ಲಾಂಗ್ ಹಿಡಿದುಕೊಂಡಿದ್ದರು.

ರೀಲ್ಸ್ ನಲ್ಲಿ ವಿನಯ್ ಗೌಡ ಲಾಂಗು ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ದರ್ಶನ್ ಅವರ ‘ಕರಿಯ’ ಸಿನಿಮಾದ ಸ್ಟೈಲ್‌ನಲ್ಲಿ ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುತ್ತಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ.  ಸಾರ್ವಜನಿಕ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಲಾಂಗ್ ಹಿಡಿದುಕೊಂಡು ರಿಲ್ಸ್ ಮಾಡಿರುವ ಆರೋಪದ ಮೇಲೆ ಈ ಎಫ್‌ಐಆರ್‌ ದಾಖಲಾಗಿದೆ. ಇನ್ನು ಈ ರೀಲ್ಸ್‌ ವಿಡಿಯೋವನ್ನು ರಜತ್ ಅವರು ಸೋಷಿಯಲ್‌ ಅಪ್ಲೋಡ್ ಮಾಡಿದ್ದರು. ಇದು ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಸದ್ಯ ಇಬ್ಬರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!