Thursday, June 4, 2026
Homeಕರಾವಳಿಕೊಡವರು ಗೋ ಮಾಂಸ ತಿನ್ನುತ್ತಾರೆ ಎಂದು ಹೇಳಿಕೆ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು

ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂದು ಹೇಳಿಕೆ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಮಡಿಕೇರಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂಬುದಾಗಿ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಇದರಿಂದಾಗಿ ಕೊಡವರ ಭಾವನೆಗೆ ಧಕ್ಕೆಯಾಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬರು ದೂರು ನೀಡಿದ ಹಿನ್ನಲೆಯಲ್ಲಿ, ಅವರ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ.

ಕೊಡವರು ಗೋಮಾಂಸ ತಿನ್ನುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯಿಂದಾಗಿ ಕೊಡವರ ಭಾವನಗೆ ಧಕ್ಕೆಯಾಗಿದೆ ಎಂಬುದಾಗಿ ಪಶ್ಟಿಮ ಘಟ್ಟ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ ಎಂಬುವರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವರ ಭಾವನೆಗೆ ಧಕ್ಕೆಯಾಗಿದೆ. ಸಿದ್ದರಾಮಯ್ಯ ಅವರು ಬಹಿರಂಗ ಕ್ಷಮೆ ಕೇಳಿದ್ರೂ ನಾವು ಕ್ಷಮಿಸೋದಿಲ್ಲ. ಕಾನೂನು ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!