Thursday, June 4, 2026
Homeಕರಾವಳಿಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ; ವಿದ್ಯಾರ್ಥಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್...

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ; ವಿದ್ಯಾರ್ಥಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ ಐಆರ್ ದಾಖಲು

- Advertisement -
- Advertisement -

ಪುತ್ತೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಯಿಂದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಚಾಕು ಇರಿತಕ್ಕೊಳಗಾದ ವಿದ್ಯಾರ್ಥಿನಿ ನೀಡಿದ ದೂರು ಆಧರಿಸಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಂಗಳವಾರ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಕೈಗೆ ವಿದ್ಯಾರ್ಥಿ ಚಾಕುವಿನಿಂದ ಇರಿದಿದ್ದ ಘಟನೆ ನಡೆದಿತ್ತು.ಇರಿತದಿಂದ ಗಾಯಗೊಂಡಿದ್ದ‌ ವಿದ್ಯಾರ್ಥಿನಿಯನ್ನು ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

- Advertisement -

Latest News

error: Content is protected !!