Saturday, June 6, 2026
Homeತಾಜಾ ಸುದ್ದಿಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಎಫ್‌ಐಆರ್‌ಗೆ ಆಗ್ರಹ- ಕರ್ನಾಟಕ್ಕೆ ಬಂದು ಅಮಿತ್ ಶಾ...

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಎಫ್‌ಐಆರ್‌ಗೆ ಆಗ್ರಹ- ಕರ್ನಾಟಕ್ಕೆ ಬಂದು ಅಮಿತ್ ಶಾ ಮಾಡಿದ್ದೇನು?

- Advertisement -
- Advertisement -

ಬೆಳಗಾವಿ: ಅಮಿತ್ ಶಾ ಕರ್ನಾಟಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜಕೀಯ ಗಣ್ಯರು ಹಲವು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಇಲ್ಲಿ ಯಾವುದೇ ಕೋವಿಡ್ ನಿಯಮವನ್ನು ಪಾಲಿಸದ ಆಯೋಜಕರ ವಿರುದ್ಧ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಷ್ಟ್ರೀಯ ವಿಪತ್ತು ನಿಯಂತ್ರಣ ಕಾಯ್ದೆಯಲ್ಲಿ ಎಫ್‌ಐಆರ್‌ ದಾಖಲಿಸಬೇಕು ಎಂದು ದಾವೆ ಹೂಡಲಾಗಿದೆ.

ಈ ಕುರಿತು ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.ಸರ್ಕಾರ ನಡೆಸುತ್ತಿರುವವರು, ಜನಸಾಮಾನ್ಯರು ಎಲ್ಲರಿಗೂ ಕಾನೂನು ಒಂದೇ ಆಗಿದೆ.ಇಲ್ಲಿ ಸಾರ್ವಜನಿಕರ ವಿರೋಧದ ನಡುವೆಯೂ ಬಿಜೆಪಿಯವರು ಆಡಳಿತ ಯಂತ್ರ ದುರುಪಯೋಗಿ ಪಡಿಸಿಕೊಂಡು ಸಮಾವೇಶ ನಡೆಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

- Advertisement -

Latest News

error: Content is protected !!