- Advertisement -
- Advertisement -
ಬೆಂಗಳೂರು:ಭಾನುವಾರ ರಾತ್ರಿ ಜೀ ಕನ್ನಡ ವಾಹಿನಿಯ ‘ಸರಿಗಮಪ’ ಗ್ರ್ಯಾಂಡ್ ಫಿನಾಲೆ ಸ್ಪರ್ಧೆ ಆಯೋಜಿಸಲಾಗಿತ್ತು. ‘ಸರಿಗಮಪ’ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮದಲ್ಲಿ ಜೀ ಕನ್ನಡ ವಾಹಿನಿ ಕೊರೋನಾ ನಿಯಮ ಉಲ್ಲಂಘಿಸಿದೆ ಎಂದು ವಾಹಿನಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಮಾಸ್ಕ್ ಧರಿಸದೆ,ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘಿಸಿದ ಕಾರ್ಯಕ್ರಮದ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕಾರ್ಯಕ್ರಮಕ್ಕೆ ಮೈಸೂರು ರಸ್ತೆಯ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 100 ಜನ ಭಾಗವಹಿಸಲು ಅನುಮತಿ ಪಡೆದುಕೊಂಡಿದ್ದು, ಅದಕ್ಕಿಂತಲೂ ಅಧಿಕ ಮಂದಿ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು ಕ್ರಮ ಜರುಗಿಸಿದ್ದಾರೆ.
- Advertisement -