
ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ದ್ವೇಷಪೂರಿತ ಹಾಗೂ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಅವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪ್ರತಿಭಟನೆ ವೇಳೆ ಶಾಸಕರು ಸಿಜೆಪಿ ಪ್ರತಿಭಟನಾಕಾರರು ಮತ್ತು ಕಾಂಗ್ರೆಸ್ ಮುಖಂಡರನ್ನು ‘ಭಯೋತ್ಪಾದಕರು’ ಎಂದು ಕರೆದಿದ್ದಲ್ಲದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ‘ಮಾದಕ ವ್ಯಸನಿ’ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 103/2026 ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಯ ವಿವಿಧ ಸೆಕ್ಷನ್‌ಗಳಾದ 57, 192, 196(2), 352, 353(2) ಮತ್ತು 351(2) ಅಡಿಯಲ್ಲಿ ಪ್ರಕರಣ ಕಾಯ್ದಿರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಹಾಗೂ ಕಾನೂನು ಕ್ರಮ ಮುಂದುವರಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


