Wednesday, June 24, 2026
Homeತಾಜಾ ಸುದ್ದಿಗೋವಾದಲ್ಲಿ ನೈಟ್ ಕ್ಲಬ್ ನಲ್ಲಿ ಅಗ್ನಿ ಅನಾಹುತ; 23 ಮಂದಿ ಸಜೀವ ದಹನ

ಗೋವಾದಲ್ಲಿ ನೈಟ್ ಕ್ಲಬ್ ನಲ್ಲಿ ಅಗ್ನಿ ಅನಾಹುತ; 23 ಮಂದಿ ಸಜೀವ ದಹನ

- Advertisement -
- Advertisement -

ಗೋವಾ: ನೈಟ್ ಕ್ಲಬ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿ 23 ಮಂದಿ ಸಜೀವ ದಹನವಾಗಿರುವ ಘಟನೆ

ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್‌ ನೈಟ್‌ ಕ್ಲಬ್‌ನಲ್ಲಿ ನಡೆದಿದೆ.

ಫೇಮಸ್‌ ನೈಟ್‌ಕ್ಲಬ್‌ ಬಿರ್ಚ್‌ನಲ್ಲಿ ಘಟನೆ ನಡೆದಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, 3-4 ಮಂದಿ ಮಾತ್ರ ಪ್ರವಾಸಿಗರಾಗಿದ್ದರು ಉಳಿದ 19 ಮಂದಿ ಕ್ಲಬ್‌ನ ಸಿಬ್ಬಂದಿಯೇ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸರು, ತಡರಾತ್ರಿ 1 ಗಂಟೆ ಸುಮಾರಿಗೆ ಕ್ಲಬ್‌ ಮುಚ್ಚಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಅಷ್ಟರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಡುಗೆ ಮನೆಯ ಬಳಿ ಗ್ಯಾಸ್‌ ಸಿಲಿಂಡರ್‌ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದೆ ಅನ್ನೋ ಶಂಕೆಯಿದೆ. ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಕೆನ್ನಾಲಿಗೆ ಚಾಚಿಕೊಂಡಿದೆ. ಕ್ಲಬ್‌ನ ಒಳಗಿದ್ದವರಿಗೆ ತಪ್ಪಿಸಿಕೊಳ್ಳಲು ಸಮಯಾವಕಾಶವಿತ್ತು. ಆದಾಗ್ಯೂ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಸಿಲಿಂಡರ್‌ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕು ಎಂದು ತಿಳಿಸಿದ್ದಾರೆ.ಸದ್ಯ ಶವಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುಗಳ ವಿವರ ಕಲೆಹಾಕುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನೂ ಅಗ್ನಿ ದುರಂತ ನೆನೆದು, ಪ್ರಧಾನಿ ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಸಂತಾಪ ಸೂಚಿಸಿದ್ದಾರೆ.ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ಅತ್ಯಂತ ದುಃಖಕರ. ತಮ್ಮ ಪ್ರೀತಿಪಾತ್ರರನ್ನ ಕಳೆದುಕೊಂಡ ಎಲ್ಲರೊಂದಿಗೂ ನನ್ನ ಚಿಂತನೆ ಇದೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಪರಿಸ್ಥಿತಿಯ ಬಗ್ಗೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯ ನೀಡುತ್ತಿದೆ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

- Advertisement -

Latest News

error: Content is protected !!