Thursday, June 4, 2026
Homeತಾಜಾ ಸುದ್ದಿನಟ ರಣವೀರ್ ಸಿಂಗ್‌ ವಿರುದ್ಧ ಎಫ್ಐಆರ್ ದಾಖಲು

ನಟ ರಣವೀರ್ ಸಿಂಗ್‌ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ಮುಂಬೈ: ಸಂಪೂರ್ಣ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ಟ್ರೋಲ್ ಆಗ್ತಿರುವ ನಟ ರಣವೀರ್ ಸಿಂಗ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಣವೀರ್ ಸಿಂಗ್ ಬೆತ್ತಲೆ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರಿಂದ ರಣವೀರ್ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಈ ಮೂಲಕ ‘ಮಹಿಳೆಯರ ಭಾವನೆಗಳನ್ನು ನೋಯಿಸಿದ್ದಾರೆ’ ಎಂದು ರಣವೀರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅರ್ಜಿ ಸಲ್ಲಿಸಲಾಗಿದೆ.

ಪೂರ್ವ ಮುಂಬೈ ಉಪನಗರದಲ್ಲಿರುವ ಸರ್ಕಾರೇತರ ಸಂಸ್ಥೆ(ಎನ್‌ಜಿಒ) ಪದಾಧಿಕಾರಿಯೊಬ್ಬರು ಚೆಂಬೂರ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನಟ ತನ್ನ ಫೋಟೋಗಳ ಮೂಲಕ ಮಹಿಳೆಯರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ. ನಮ್ರತೆಗೆ ಅವಮಾನ ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ ಅಲ್ಲದೆ ನಟನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರುದಾರರು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!