Wednesday, June 3, 2026
Homeತಾಜಾ ಸುದ್ದಿಮಾಜಿ ಸಚಿವ ಮುರುಗೇಶ್ ನಿರಾಣಿ ಮೇಲೆ ಎಫ್ಐಆರ್ ದಾಖಲು

ಮಾಜಿ ಸಚಿವ ಮುರುಗೇಶ್ ನಿರಾಣಿ ಮೇಲೆ ಎಫ್ಐಆರ್ ದಾಖಲು

- Advertisement -
- Advertisement -

ಬಾಗಲಕೋಟೆ: ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮುಧೋಳ ಪೊಲೀಸ್ ಠಾಣೆಯಲ್ಲಿ ಎಫ್ಐ ಆರ್ ದಾಖಲಾಗಿದೆ.

ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ ವೇಳೆ ಅವರ ಜೊತೆ ಹನುಮಂತ ಶಿಂಧೆ ಕಾರಿನಲ್ಲಿ ಬೀಳಗಿಯಲ್ಲಿ ಭಿಕ್ಷಾಟನೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು.

ಇಂಗಳಗಿ ಬೈಪಾಸ್ ರೋಡ್ ಬಳಿ ಮುರುಗೇಶ್ ನಿರಾಣಿ ಮತ್ತು ಹನುಮಂತ ನಿರಾಣಿ ಅವರು ಮುಖವಾಡ ಧರಿಸಿದ್ದ ಆರು ಜನ ಗೂಂಡಾಗಳನ್ನು ಬೊಲೆರೋ ವಾಹನದಲ್ಲಿ ಕಳುಹಿಸಿ ಮಾರಣಾಂತಿಕ ಹಲ್ಲೆ ಮಾಡಿಸಿದ್ದಾರೆ ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಸೋಮವಾರ ಬೆಳಗ್ಗೆ ಇಂಗಳಗಿ ಕ್ರಾಸ್ ಬಳಿ ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆಯಾಗಿತ್ತು. ಹಲ್ಲೆ ವೇಳೆ ತಲೆಗೆ ಗಂಭೀರ ಗಾಯಗೊಂಡಿರುವ ಯಲ್ಲಪ್ಪ ಹೆಗಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

Latest News

error: Content is protected !!