Thursday, June 4, 2026
Homeಕೊಡಗುಕೊಡಗು ಜಿ.ಪಂ. ಸಿಇಓ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದಡಿ ಎಫ್ ಐಆರ್ ದಾಖಲು

ಕೊಡಗು ಜಿ.ಪಂ. ಸಿಇಓ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದಡಿ ಎಫ್ ಐಆರ್ ದಾಖಲು

- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯತ್ ಸಿಇಓ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಐಎಎಸ್ ಅಧಿಕಾರಿ ಆಕಾಶ್ ಶಂಕರ್ ವಿರುದ್ಧ ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ನಿ ವಂದನಾ ವರದಕ್ಷಿಣೆ ಕಿರಕುಳ ದೂರು ದಾಖಲಿಸಿದ್ದಾರೆ.

ಅಲ್ಲದೇ ಆಕಾಶ್ ತಂದೆ ಶಂಕರ್, ತಾಯಿ ಚಂದ್ರಿಕಾ, ಸಹೋದರ ವಿಕಾಸ್ ವಿರುದ್ಧವೂ ದೂರು ದಾಖಲಾಗಿದೆ. ಹಣ, ಕಾರು ಮತ್ತು ವಾಚ್ ನೀಡುವಂತೆ ಕಿರುಕುಳ ನೀಡಿದ ಆರೋಪದಡಿ ಐಎಎಸ್ ಅಧಿಕಾರಿ ಆಕಾಶ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಐಎಎಸ್ ಅಧಿಕಾರಿಯಾಗಿರುವ ಡಾ. ಅಕಾಶ್ ಶಂಕರ್ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

- Advertisement -

Latest News

error: Content is protected !!