Thursday, June 4, 2026
Homeತಾಜಾ ಸುದ್ದಿಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಎಫ್ ಐ ಆರ್ ದಾಖಲು

ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಎಫ್ ಐ ಆರ್ ದಾಖಲು

- Advertisement -
- Advertisement -

ನವದೆಹಲಿ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ 7 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ನ್ಯೂ ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್ ಬೌನ್ಸ್ ಚೆಕ್‌ಗೆ ಸಂಬಂಧಿಸಿದಂತೆ ಬಿಹಾರದ ಬೇಗುಸರಾಯ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಎಸ್‌ಕೆ ಎಂಟರ್‌ಪ್ರೈಸಸ್ ಹೆಸರಿನ ಕಂಪನಿಯು ಬೇಗುಸರಾಯ್‌ನ ಸಿಜೆಎಂ ನ್ಯಾಯಾಲಯದಲ್ಲಿ ಎಫ್‌ಐಆರ್ ದಾಖಲಿಸಿದೆ. ಪ್ರಕರಣ ದಾಖಲಿಸಿದವರು ‘ನ್ಯೂ ​​ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್’ ನಿಂದ ಪಡೆದ 30 ಲಕ್ಷ ರೂಪಾಯಿ ಮೌಲ್ಯದ ಚೆಕ್ ಬೌನ್ಸ್ ಆಗಿದೆ ಎಂದು ಆರೋಪಿಸಿದ್ದಾರೆ. ಧೋನಿ ಉತ್ಪನ್ನದ ಪ್ರಚಾರ ಮಾಡಿದ್ದರು, ಹಾಗಾಗಿ ದೂರುದಾರರು ಎಫ್‌ಐಆರ್‌ನಲ್ಲಿ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ.

ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣವನ್ನು ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅಜಯ್ ಕುಮಾರ್ ಮಿಶ್ರಾ ಅವರಿಗೆ ಕಳುಹಿಸಿದ್ದು, ಪ್ರಕರಣದ ಮುಂದಿನ ವಿಚಾರಣೆ ಜೂನ್ 28 ರಂದು ನಡೆಯಲಿದೆ.

- Advertisement -

Latest News

error: Content is protected !!