Tuesday, May 21, 2024
Homeಕರಾವಳಿರಾಷ್ಟ್ರಧ್ವಜಕ್ಕೆ ಅವಮಾನ ಪ್ರಕರಣ: ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ರಾಷ್ಟ್ರಧ್ವಜಕ್ಕೆ ಅವಮಾನ ಪ್ರಕರಣ: ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

spot_img
- Advertisement -
- Advertisement -

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಪೆಬ್ರವರಿ 28 ರಂದು ನಡೆದ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರಾಷ್ಟ್ರಧ್ವಜಕ್ಕೆ ಅವಮಾನವಾಗುವಂತೆ ಉದ್ರೇಕಕಾರಿ ಭಾಷಣ ಮಾಡಿ , ದೆಹಲಿಯ ಕೆಂಪುಕೋಟೆಯಲ್ಲಿ ಭಗವಾಧ್ವಜವನ್ನು ಹಾರಿಸುತ್ತೇವೆ ಎಂದು ಹೇಳಿದಲ್ಲದೆ , ಮುಂದುವರಿದು ಮಾತನಾಡಿ ತ್ರಿವರ್ಣ ಧ್ವಜದ ಕೆಳಗೆ ಭಗವಾಧ್ವಜವನ್ನು ಹಾರಿಸುತ್ತೇವೆ ಎಂದು ದೇಶದ್ರೋಹಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ (ನಗರ) ಅಧ್ಯಕ್ಷ ಅನಿಲ್ ಪೈ ಅವರು ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ಶಾಸಕ ಹರೀಶ್ ಪೂಂಜಾ ಅವರ ಹೇಳಿಕೆ ಸಂವಿಧಾನ ವಿರೋಧಿಯಾಗಿದ್ದು , ರಾಷ್ಟ್ರಧ್ವಜವನ್ನು ಸಾರ್ವಜನಿಕವಾಗಿ , ಬಹಿರಂಗವಾಗಿ ಅವಮಾನ ಪಡಿಸಿದ್ದು ದೇಶದ್ರೋಹವಾಗಿದ್ದು , ಸಂವಿಧಾನದ ಆಧಾರದಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕರು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದು , ದೇಶದ್ರೋಹವಾಗಿದ್ದು , ತಕ್ಷಣ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ‌.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಅನಿಲ್ ಪೈ, ಯುವ ಕಾಂಗ್ರೆಸ್ ನಗರ ಉಪಾಧ್ಯಕ್ಷ ರಾಘವೇಂದ್ರ ಮೇಲಂತಬೆಟ್ಟು, ಯುವ ಇಂಟಕ್ ಕಾಂಗ್ರೆಸ್ ನಗರ ಅಧ್ಯಕ್ಷ ನವೀನ ಗೌಡ ಸವಣಾಲು, ಮುಖಂಡರಾದ ಗಣೇಶ್ ಕಣಿಯೂರು , ಗುರುರಾಜ್ ಗುರಿಪಳ್ಳ, ಸುಧೀರ್ ದೇವಾಡಿಗ ಬೆಳ್ತಂಗಡಿ, ಧನುಷ್ ಕುಲಾಲ್ ಇಂದಬೆಟ್ಟು, ಸೂರಜ್ ಅಳದಂಗಡಿ, ಸಿದ್ದಿಕ್ ಕೊಯ್ಯೂರು, ವಸಂತ ಮೇಲಂತಬೆಟ್ಟು, ವಿನೋದ್ ಮೇಲಂತಬೆಟ್ಟು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!