ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ತನಿಶಾ ಕುಪ್ಪಂಡ ವಿರುದ್ಧ ಎರಡು ದೂರು ದಾಖಲಾಗಿದೆ. ಈ ಹಿನ್ನೆಲೆ ದೊಡ್ಮನೆಗೇ ಬಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಡ್ರೋನ್ ಪ್ರತಾಪ್ ಜೊತೆ ಮಾತನಾಡುತ್ತಾ ತನಿಶಾ ಕುಪ್ಪಂಡ ಬೋವಿ ಸಮಾಜದ ಬಗ್ಗೆ ಅವಹೇಳನ ಪದ ಬಳಕೆ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಬೋವಿ ಸಮಾಜದ ಅಧ್ಯಕ್ಷೆ ಪಿ.ಪದ್ಮಾ ಎಂಬುವರು ತನಿಶಾ ವಿರುದ್ಧ ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ಬಿಗ್ ಬಾಸ್ ಮನೆಗೆ ಬಂದು ತನಿಶಾ ಹಾಗೂ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಇದರ ಬೆನ್ನಲ್ಲೇ ಬಹುಜನ ದಲಿತ ಸಂಘರ್ಷ ಸಮಿತಿಯಿಂದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಬಿಗ್ ಬಾಸ್ ಸ್ಪರ್ಧಿ ತನಿಶಾ ಕುಪ್ಪಂಡ ವಿರುದ್ಧ ಮತ್ತೊಂದು ದೂರು ನೀಡಲಾಗಿದೆ.
ಬಹುಜನ ದಲಿತ ಸಂಘರ್ಷ ಸಮಿತಿ ನೀಡಿದಂತ ದೂರಿನಲ್ಲಿ ಬೋವಿ ಸಮಾಜದ ಬಗ್ಗೆ ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ಅವರು ಅವಹೇಳನಕಾರಿಯಾಗಿ ಪದ ಬಳಕೆ ಮಾಡಿದ್ದಾರೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.