Sunday, June 7, 2026
Homeತಾಜಾ ಸುದ್ದಿಭಾರೀ ಬೆಂಕಿ ಅನಾಹುತ: ನೋಡ ನೋಡುತ್ತಿದ್ದಂತೆ 9 ಜನ ಸಜೀವ ದಹನ

ಭಾರೀ ಬೆಂಕಿ ಅನಾಹುತ: ನೋಡ ನೋಡುತ್ತಿದ್ದಂತೆ 9 ಜನ ಸಜೀವ ದಹನ

- Advertisement -
- Advertisement -

ಕೋಲ್ಕತ್ತಾ: 13ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ಜನ ಸಜೀವ ದಹನವಾಗಿರುವ  ಘಟನೆ ಕೋಲ್ಕತ್ತಾದ ಸ್ಟ್ಯಾಂಡ್ ರಸ್ತೆಯಲ್ಲಿ ನಡೆದಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಬೆಂಕಿ ನಂದಿಸಲು ತೆರಳಿದ್ದ ಸಿಬ್ಬಂದಿ ಸಹ ಕಟ್ಟಡದಲ್ಲಿ ಸಿಲುಕಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಟ್ಟಡದ ಮುಂಭಾಗಿನ ರಸ್ತೆಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂದ್ ಮಾಡಲಾಗಿತ್ತು. ಇನ್ನು ಘಟನಾ ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ ನೀಡಿದ ಪೊಲೀಸ್ ಕಮೀಷನರ್ ಅವರಿಂದ ಮಾಹಿತಿ ಪಡೆದುಕೊಂಡು, ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮತ್ತು ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ಉದ್ಯೋಗ ಸಹ ನೀಡಲಾಗುವುದು ಎಂದು ಘೋಷಿಸಿದರು.

ಘಟನೆಯಲ್ಲಿ ಇಬ್ಬರು ಸಿಆರ್ ಪಿ ಫ್ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಎಂಟು ಜನ ಕಾಣಿಸುತ್ತಿಲ್ಲ. ಬೆಂಕಿ ನಿಯಂತ್ರಣಕ್ಕೆ ತರಲಾಗಿದ್ದು, ಕಾಣೆಯಾದವರ ಹುಡುಕಾಟ ನಡೆಸಲಾಗುತ್ತಿದೆ. ಇನ್ನು ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!