- Advertisement -
![]()
- Advertisement -
ಮಂಗಳೂರು: ಹೆಂಚಿನ ಕಾರ್ಖಾನೆವೊಂದರಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದ ಘಟನೆ ನಗರದ ಹೊಯ್ದೆ ಬಝಾರ್ ನಲ್ಲಿ ಸಂಭವಿಸಿದೆ.
ಕಾರ್ಖಾನೆಯಲ್ಲಿ ಮಂಗಳವಾರ ಮುಂಜಾನೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯು ಕ್ಷಣಾರ್ಧದಲ್ಲಿ ಕಾರ್ಖಾನೆಯನ್ನು ಆವರಿಸಿ, ಕಾರ್ಖಾನೆಯ ಆವರಣದಲ್ಲಿ ಹೆಂಚು ಸುಡಲು ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಮತ್ತು ಇತರ ದಹ್ಯ ವಸ್ತುಗಳಿದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನ ನಡೆಸಿದ್ದಾರೆ.
- Advertisement -


