Thursday, July 16, 2026
Homeಕರಾವಳಿಮಂಗಳೂರುಮಂಗಳೂರು: ತರಕಾರಿ ಮಾರುಕಟ್ಟೆಯಲ್ಲಿ ಅಗ್ನಿ ಅನಾಹುತ

ಮಂಗಳೂರು: ತರಕಾರಿ ಮಾರುಕಟ್ಟೆಯಲ್ಲಿ ಅಗ್ನಿ ಅನಾಹುತ

- Advertisement -
- Advertisement -

ಮಂಗಳೂರು: ತರಕಾರಿ ಮಾರುಕಟ್ಟೆಯಲ್ಲಿ ಬೆಂಕಿ ಅನಾಹುತ ಸಂಭವಿಸಿರುವ ಘಟನೆ ಮಂಗಳೂರು ಹೊರವಲಯದ ಕಲ್ಲಾಪು ಮಾರುಕಟ್ಟೆಯಲ್ಲಿ ನಡೆದಿದೆ.

ಇಂದು ಬೆಳಗ್ಗಿನ ಜಾವ ಬೆಂಕಿ ಅವಘಡ ‌ಉಂಟಾಗಿದ್ದು, ಸುಮಾರು ಆರು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.

ಇದೇ ವೇಳೆ, ಸುಮಾರು ಹತ್ತರಷ್ಟು ಅಂಗಡಿಗಳಿಗೆ ಬೆಂಕಿಯಿಂದ ಭಾಗಶಃ ಹಾನಿಯಾಗಿದ್ದು, ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಸಾವಿರಾರು ರೂಪಾಯಿ ಮೌಲ್ಯದ ತರಕಾರಿ ಸುಟ್ಟು ಹೋಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಉಂಟಾಗಿರುವ ಶಂಕೆ ವ್ಯಕ್ತವಾಗಿದೆ.

- Advertisement -

Latest News

error: Content is protected !!