- Advertisement -
- Advertisement -
ಮುಂಬೈ: ನಗರದ ಬೋರಿವೇಲಿಯ (ವೆಸ್ಟ್) ನಲ್ಲಿರುವ ಶಾಪಿಂಗ್ ಸೆಂಟರ್ ವೊಂದರಲ್ಲಿ ಇಂದು ಬೆಳಂಬೆಳಗ್ಗೆಯೇ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಯ ಕೆನ್ನಾಲಿಗೆಯಲ್ಲಿ ಅಪಾರ ಪ್ರಮಾಣದ ವಸ್ತುಗಳು ದಹಿಸಿಹೋಗಿದ್ದು, ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಭಾರಿ ಪ್ರಮಾಣದಲ್ಲಿ ಹೊಗೆ ಆವರಿಸಿದ್ದರಿಂದ ಆತಂಕಗೊಂಡ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಸ್ಥಳಕ್ಕೆ 14 ಅಗ್ನಿಶಾಮಕ ಇಲಾಖೆ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸವನ್ನೇ ನಡೆಸಬೇಕಾಯಿತು. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
- Advertisement -