Friday, August 28, 2026
Homeಕರಾವಳಿಉಡುಪಿಆದಿಉಡುಪಿ ಸಂತೆ ಮಾರ್ಕೆಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹಣ್ಣಿನ ಅಂಗಡಿಗೆ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟ

ಆದಿಉಡುಪಿ ಸಂತೆ ಮಾರ್ಕೆಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹಣ್ಣಿನ ಅಂಗಡಿಗೆ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟ

- Advertisement -
- Advertisement -

ಉಡುಪಿ: ನಗರದ ಆದಿಉಡುಪಿ ಸಂತೆ ಮಾರ್ಕೆಟ್‌ನಲ್ಲಿರುವ ಹಣ್ಣು-ಹಂಪಲು ಸಂಗ್ರಹ ಕೇಂದ್ರವೊಂದಕ್ಕೆ ಜೂನ್ 21ರ ಭಾನುವಾರ ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ.

ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಅಲ್ಲಿ ಸಂಗ್ರಹಿಸಿಡಲಾಗಿದ್ದ ಹಣ್ಣುಗಳ ಬಾಕ್ಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಕ್ಷಣಾರ್ಧದಲ್ಲೇ ಜ್ವಾಲೆಯು ಇಡೀ ಅಂಗಡಿಯ ಒಳಭಾಗವನ್ನು ಆವರಿಸಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎನ್ನಲಾಗಿದೆ.

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಅಂಗಡಿಯಲ್ಲಿದ್ದ ಅಪಾರ ಪ್ರಮಾಣದ ಹಣ್ಣು-ಹಂಪಲು ಹಾಗೂ ಇತರೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

- Advertisement -

Latest News

error: Content is protected !!