Friday, June 26, 2026
Homeಕರಾವಳಿಉಡುಪಿಕುಂದಾಪುರ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ, ಲಕ್ಷಾಂತರ ರೂಪಾಯಿ ನಷ್ಟ

ಕುಂದಾಪುರ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ, ಲಕ್ಷಾಂತರ ರೂಪಾಯಿ ನಷ್ಟ

- Advertisement -
- Advertisement -

ಕುಂದಾಪುರ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಚಿಕನ್ ಸಾಲು ರಸ್ತೆಯಲ್ಲಿ ನಡೆದಿದೆ.ಚಿಕನ್ ಸಾಲು ರಸ್ತೆಯಲ್ಲಿರುವ ಚಂದ್ರಶೇಖರ್ ಎಂಬವರ ಕಿರಾಣಿ ಅಂಗಡಿಗೆ ಅಕಸ್ಮಿಕ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ಸಾಮಾನುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.

ಅಂಗಡಿ ಮಾಲೀಕ ಬೆಳಿಗ್ಗೆ ಅಂಗಡಿಯ ಬಾಗಿಲನ್ನು ತೆರೆದು ದೇವರಿಗೆ ದೀಪವನ್ನು ಹಚ್ಚಿ ಹತ್ತಿರದ ಶ್ರೀ ಮೈಲಾರೇಶ್ವರ ದೇವಸ್ಥಾನಕ್ಕೆ ಹೋಗಿ ಕೆಲವೇ ನಿಮಿಷಗಳಲ್ಲಿ ಅಂಗಡಿಗೆ ವಾಪಾಸ್  ಬರುವುದರೊಳಗೆ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. 

ಅಂಗಡಿಯೊಳಗಿದ್ದ ಫ್ರಿಡ್ಜ್, ಕಪಾಟು, ಶೋಕೇಸ್, ಪೀಠೋಪಕರಣ, ಅಂಗಡಿ ಸಾಮಾನುಗಳು ಹೊತ್ತಿದ ಬೆಂಕಿಗೆ ಸಂಪೂರ್ಣ ಕರಗಿಹೋಗಿದ್ದು ಸುಮಾರು 4 ರಿಂದ 5 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ.

- Advertisement -

Latest News

error: Content is protected !!