Thursday, June 4, 2026
Homeತಾಜಾ ಸುದ್ದಿಏಲೂರು: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ- 6 ಮಂದಿ ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ

ಏಲೂರು: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ- 6 ಮಂದಿ ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ

- Advertisement -
- Advertisement -

ಏಲೂರು : ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡದಿಂದ ಘೋರ ದುರಂತವೊಂದು ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಮಾಸುನೂರು ವಲಯದ ಅಕ್ಕಿರೆಡ್ಡಿಗುಡೆಂನಲ್ಲಿ ಸಂಭವಿಸಿದೆ.

ಅಕ್ಕಿರೆಡ್ಡಿಗುಡೆಂನಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಜನರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಅವಘಡ ಸಂಭವಿಸುವ ವೇಳೆ 150 ಮಂದಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಸಾಕಷ್ಟು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದು, ಹೆಚ್ಚಿನ ಅವಘಡದಿಂದ ಪಾರುಮಾಡಿದ್ದಾರೆ.

- Advertisement -

Latest News

error: Content is protected !!