Thursday, June 4, 2026
Homeಕರಾವಳಿಉಡುಪಿಕಾಪು: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ಲಕ್ಷಾಂತರ ರೂ. ನಷ್ಟ

ಕಾಪು: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ಲಕ್ಷಾಂತರ ರೂ. ನಷ್ಟ

- Advertisement -
- Advertisement -

ಕಾಪು : ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನಿಂದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕಾಪುವಿನ ಪೊಲಿಪು ಸರ್ಕಲ್‌ ಸಮೀಪದ ಮನೆಯೊಂದರಲ್ಲಿ ನಡೆದಿದೆ.

ಪೊಲಿಪು ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್ ನಲ್ಲಿ ವಾಸವಿದ್ದ ಗುರುರಾಜ್ ಬುವವರ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿದೆ. ಬೆಂಕಿ ಅನಾಹುತದಿಂದ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟುಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟವುಂಟಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.  

- Advertisement -

Latest News

error: Content is protected !!