Thursday, June 4, 2026
Homeಕರಾವಳಿಮಂಗಳೂರು: ಲಾಡ್ಜ್ ರೂಂನಲ್ಲಿ ಕಾಣಿಸಿಕೊಂಡ ಬೆಂಕಿ; ಬೆಡ್ ಮೇಲೆ ಮಲಗಿದ್ದ ವ್ಯಕ್ತಿ ಜೀವಂತ ದಹನ

ಮಂಗಳೂರು: ಲಾಡ್ಜ್ ರೂಂನಲ್ಲಿ ಕಾಣಿಸಿಕೊಂಡ ಬೆಂಕಿ; ಬೆಡ್ ಮೇಲೆ ಮಲಗಿದ್ದ ವ್ಯಕ್ತಿ ಜೀವಂತ ದಹನ

- Advertisement -
- Advertisement -

ಮಂಗಳೂರು: ಲಾಡ್ಜ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡು ಬೆಡ್ ಮೇಲೆ ಮಲಗಿದ್ದ ವ್ಯಕ್ತಿ ಜೀವಂತ ದಹನವಾಗಿರುವ ದಾರುಣ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ.

ಕಂಕನಾಡಿಯ ರೆಸಿಡೆನ್ಸಿ ಗೇಟ್ ಲಾಡ್ಜ್ ನಲ್ಲಿ ಈ ಘಟನೆ ನಡೆದಿದ್ದು, 43 ವರ್ಷದ ಬೆಂದೂರ್ ವೆಲ್ ನಿವಾಸಿ ಯಶ್ ರಾಜ್ ಸುವರ್ಣ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಮೃತ ಯಶ್ ರಾಜ್ ಒಂದು ವಾರದಿಂದ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿದ್ದು,
ನಿನ್ನೆ ಮಧ್ಯರಾತ್ರಿ ವೇಳೆಗೆ ರೂಮಿನ ಒಳಗಿನಿಂದ ಹೊಗೆ ಕಾಣಿಸಿಕೊಂಡಿದ್ದು ಆಗ ಘಟನೆ ಬೆಳಕಿಗೆ ಬಂದಿದೆ.

ಅಗ್ನಿಶಾಮಕ ದಳ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದು,
ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅನುಮಾನಸ್ಪದ ಸಾವು ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!