Friday, June 5, 2026
Homeಕರಾವಳಿಮಂಗಳೂರಿನಲ್ಲಿ ಆಟೋ ಸ್ಪೇರ್ ಪಾರ್ಟ್ಸ್ ಅಂಗಡಿ ಬೆಂಕಿಗಾಹುತಿ

ಮಂಗಳೂರಿನಲ್ಲಿ ಆಟೋ ಸ್ಪೇರ್ ಪಾರ್ಟ್ಸ್ ಅಂಗಡಿ ಬೆಂಕಿಗಾಹುತಿ

- Advertisement -
- Advertisement -

ಮಂಗಳೂರು: ಮುಚ್ಚಿದ್ದ ಆಟೋ ಸ್ಪೇರ್ ಪಾರ್ಟ್ಸ್ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸಂಭವಿಸಿದೆ.

ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯಿರುವ ಗೋಲ್ಡನ್ ಸ್ಪೇರ್ ಪಾರ್ಟ್ಸ್ ಅಂಗಡಿಯಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ಮುಚ್ಚಿದ್ದ ಅಂಗಡಿಯಲ್ಲಿ ದಟ್ಟವಾಗಿ ಹೊಗೆ ಆವರಿಸಿರುವುದನ್ನು ಕಂಡ ಸ್ಥಳೀಯರು ಶಟರ್ ತೆರೆದು ನೋಡಿದಾಗ ಬೆಂಕಿ ತಗಲಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಸ್ಥಳೀಯರು ಸೇರಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಬೆಂಕಿ ಅಂಗಡಿಗೆ ಸಂಪೂರ್ಣ ವ್ಯಾಪಿಸಿ ಲಕ್ಷಾಂತರ ನಷ್ಟ ಸಂಭವಿಸಿದೆ.ಅಗ್ನಿ ಶಾಮಕ ದಳಕ್ಕೆ ಸ್ಥಳಕ್ಕಾಗಮಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಗೆ ನಿಖರ ಕಾರಣಗಳು ಗೊತ್ತಾಗಿಲ್ಲ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!