Monday, May 20, 2024
Homeಕರಾವಳಿಮಂಗಳೂರು; ಅತ್ತಾವರದ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ವೊಂದರಲ್ಲಿ ಅಗ್ನಿ ಆಕಸ್ಮಿಕ

ಮಂಗಳೂರು; ಅತ್ತಾವರದ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ವೊಂದರಲ್ಲಿ ಅಗ್ನಿ ಆಕಸ್ಮಿಕ

spot_img
- Advertisement -
- Advertisement -

ಮಂಗಳೂರು:  ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ವೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ತಕ್ಷಣ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿ, ಅನಾಹುತ ತಪ್ಪಿಸಿದ್ದಾರೆ.

ಮೂರು ಅಂತಸ್ತಿನ ಅಪಾರ್ಟ್ ಮೆಂಟ್‌ನ ಎರಡನೇ ಮಹಡಿಯಲ್ಲಿರುವ ಫ್ಲ್ಯಾಟ್ ನಿಂದ ರಾತ್ರಿ ಸುಮಾರು 7:30ರ ವೇಳೆಗೆ ಹೊಗೆ ಬರುತ್ತಿದ್ದುದನ್ನು ಗಮನಿಸಿದ ಇತರ ಫ್ಲ್ಯಾಟ್ ನಿವಾಸಿಗಳು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.

ಬೆಂಕಿ ಕಾಣಿಸಿಕೊಂಡ ಫ್ಲ್ಯಾಟ್‌ನ ಜನರು ಬೆಂಗಳೂರಿಗೆ ತೆರಳಿದ್ದು, ಬಾಗಿಲು ಮುಚ್ಚಿರುವುದು ಕಂಡು ಬಂದಿದೆ. ಹಾಗಾಗಿ ಅಗ್ನಿಶಾಮಕ ದಳದವರು ಬಾಗಿಲು ತೆರೆದು ಬೆಂಕಿ ನಂದಿಸಿದ್ದಾರೆ. ಬೆಂಕಿ ಅವಘಡದಿಂದ ಬೆಡ್ ರೂಮ್ ನಲ್ಲಿದ್ದ ಕೆಲವು ಪರಿಕರಗಳು ಸುಟ್ಟು ಹೋಗಿರುವುದಾಗಿ ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

- Advertisement -
spot_img

Latest News

error: Content is protected !!