- Advertisement -
- Advertisement -
ಕಾಸರಗೋಡು: ರಾತ್ರೋರಾತ್ರಿ ಅಗ್ನಿ ಆಕಸ್ಮಿಕ ಸಂಭವಿಸಿ ಅಂಗಡಿಗಳು ಹೊತ್ತಿ ಉರಿದ ಘಟನೆ ಪೆರ್ಲ ಬಳಿ ನಡೆದಿದೆ.
ಪೆರ್ಲ ಪೇಟೆಯಲ್ಲಿರುವ ಪೂಜಾ ಫ್ಯಾನ್ಸಿ , ಗೋಪಿನಾಥ್ ಪೈ ಕ್ಲೋತ್ ಸೆಂಟರ್, ಪತ್ರಿಕಾ ವಿತರಣಾ ಮಳಿಗೆ, ಪ್ರವೀಣ್ ಆಟೋ ಮೊಬೈಲ್, ಸಾದತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ಮೊದಲಾದವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ರಾತ್ರಿ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು , ಉಪ್ಪಳ ಕಾಸರಗೋಡಿನಿಂದ ಆಗಮಿಸಿದ ಐದು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
- Advertisement -