Thursday, May 2, 2024
Homeತಾಜಾ ಸುದ್ದಿಮೆಟ್ರೋ ನಿಲ್ದಾಣದ ಬಳಿಯ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡ: 27 ಜನ ಬೆಂಕಿಗೆ...

ಮೆಟ್ರೋ ನಿಲ್ದಾಣದ ಬಳಿಯ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡ: 27 ಜನ ಬೆಂಕಿಗೆ ಆಹುತಿ

spot_img
- Advertisement -
- Advertisement -

ನವದೆಹಲಿ: ಪಶ್ಚಿಮ ದೆಹಲಿ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ನಿನ್ನೆ ಸಂಭವಿಸಿದ ಬೆಂಕಿ ದುರಂತದಲ್ಲಿ 27 ಜನ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 7 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ ನಂತರ ಬೆಂಕಿಯನ್ನು ಹತೋಟಿಗೆ ತಂದರೂ ಮಹಡಿಯಿಂದ ಹೊಗೆ ಬರುತ್ತಲೇ ಇತ್ತು.

ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಾಗ 70 ಕ್ಕೂ ಹೆಚ್ಚು ಜನ ಕಟ್ಟಡದಲ್ಲಿದ್ದರು. ಬೆಂಕಿ ಸಂಪೂರ್ಣ ಕಟ್ಟಡವನ್ನು ಆವರಿಸಿದ್ದರಿಂದ ಕಿಟಕಿಗಳನ್ನು ಒಡೆದು ಹಗ್ಗಗಳನ್ನು ಬಳಸಿ ಕೆಲವರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಸಿಬ್ಬಂದಿ ತಿಳಿಸಿದ್ದಾರೆ.

ಗಾಯಗೊಂಡ 12 ಜನರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಪೊಲೀಸ್ ಉಪ ಕಮಿಷನರ್ ಸಮೀರ್ ಶರ್ಮಾ ಅವರು, ಮೊದಲ ಮಹಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ವೈ-ಫೈ ರೂಟರ್‌ಗಳನ್ನು ತಯಾರಿಸುವ ಸಂಸ್ಥೆಯ ಕಚೇರಿಯನ್ನು ಹೊಂದಿದೆ. ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆ ಮಾಲೀಕರಾದ ಹರೀಶ್ ಗೋಯೆಲ್ ಮತ್ತು ವರುಣ್ ಗೋಯೆಲ್ ಅವರನ್ನು ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ.

ರಾತ್ರಿ 11 ಗಂಟೆಗೆ 26 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಾಳುಗಳನ್ನು ರಕ್ಷಿಸ ಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ

- Advertisement -
spot_img

Latest News

error: Content is protected !!