Saturday, June 6, 2026
Homeಕರಾವಳಿಉಡುಪಿಉಡುಪಿ; ರೆಸ್ಟೋರೆಂಟ್ ನಲ್ಲಿ ಬೆಂಕಿ ಅನಾಹುತ

ಉಡುಪಿ; ರೆಸ್ಟೋರೆಂಟ್ ನಲ್ಲಿ ಬೆಂಕಿ ಅನಾಹುತ

- Advertisement -
- Advertisement -

ಉಡುಪಿ: ಈಶ್ವರನಗರದ ಸಮೀಪದ ಹಕುವ ಮಟಾಟ ಬಾರ್ ಆಯಂಡ್ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿ ಅಡುಗೆಕೋಣೆಯ ಸಲಕರಣೆ, ಫ್ರಿಡ್ಜ್, ಅಡುಗೆ ಸಾಮಾನುಗಳು ಸುಟ್ಟು ಹೋಗಿರುವ ಘಟನೆ ಮಣಿಪಾಲದ ಈಶ್ವರನಗರದ ಸಮೀಪದ ಹಕುವ ಮಟಾಟ ಬಾರ್ ಆಯಂಡ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ರೆಸ್ಟೋರೆಂಟ್‌ನ ಅಡುಗೆ ಕೋಣೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಅಡುಗೆಕೋಣೆಯ ಸಲಕರಣೆ, ಫ್ರಿಡ್ಜ್, ಅಡುಗೆ ಸಾಮಾನುಗಳು ಬೆಂಕಿಯಿಂದ ಸುಟ್ಟು ಹೋಗಿದೆ .ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಸುಮಾರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡದಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!