Thursday, June 4, 2026
Homeತಾಜಾ ಸುದ್ದಿಬೆಂಗಳೂರು: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅನಾಹುತ; 8 ರಿಂದ 10ಮಂದಿಗೆ ಗಾಯ

ಬೆಂಗಳೂರು: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅನಾಹುತ; 8 ರಿಂದ 10ಮಂದಿಗೆ ಗಾಯ

- Advertisement -
- Advertisement -

ಬೆಂಗಳೂರು: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅನಾಹುತ ಸಂಭವಿಸಿ 8ರಿಂದ 10 ಮಂದಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡದಲ್ಲಿ ಅವಘಡ ನಡೆದಿದೆ.

ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡದಲ್ಲಿ ಆಕಸ್ಮಿಕವಾಗಿ ಈ ಬೆಂಕಿ ಅವಘಡ ಸಂಭವಿಸಿದೆ. ಘಟನೆ ಸಂಭವಿಸಿ ಅರ್ಧ ಗಂಟೆಯಾದರೂ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಆಗಮಿಸಿಲ್ಲ. ನಂತರ ತಡವಾಗಿ ಬಂದ ಸಿಬ್ಬಂದಿ, ಬೆಂಕಿಯನ್ನು ಸಂಪೂರ್ಣ ನಂದಿಸಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ.

ಬೆಂಕಿ ದುರ್ಘಟನೆಯನ್ನು ಗಾಯಗೊಂಡ ಹತ್ತು ಮಂದಿಯನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಗಂಭೀರವಾಗಿ ಸುಟ್ಟ ಬಿಬಿಎಂಪಿ ನೌಕರನಿಗೆ ಸೆಂಟ್ ಮಾರ್ಥಾಸ್​ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವಿಕ್ಟೋರಿಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.ಘಟನಾ ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಬೆಂಕಿ ಹತ್ತಿಕೊಂಡ ಮಾಹಿತಿ ತಿಳಿದ ತಕ್ಷಣ ಬಿಬಿಎಂಪಿ ನೌಕರರು ಹಾಗೂ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದಾರೆ.

ರು, ಲ್ಯಾಬ್‌ನಲ್ಲಿ ಬೆಂಜೀನ್ ರಸಾಯನಿಕ ಸ್ಫೋಟದಿಂದ ಘಟನೆ ಎಂದು ಹೇಳಲಾಗುತ್ತಿದ್ದು ಪರಿಶೀಲನೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!