Wednesday, June 24, 2026
Homeಕರಾವಳಿಉಡುಪಿಉಡುಪಿ;  ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅವಘಡ: ತ್ಯಾಜ್ಯ ಸಂಗ್ರಹ ಮಾಡುವ ವಾಹನ ಸ್ಫೋಟ

ಉಡುಪಿ;  ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅವಘಡ: ತ್ಯಾಜ್ಯ ಸಂಗ್ರಹ ಮಾಡುವ ವಾಹನ ಸ್ಫೋಟ

- Advertisement -
- Advertisement -

ಉಡುಪಿ;  ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ ತ್ಯಾಜ್ಯ ಸಂಗ್ರಹ ಮಾಡುವ ವಾಹನ ಸ್ಫೋಟವಾಗಿರುವ ಘಟನೆ ಬ್ರಹ್ಮಾವರದಲ್ಲಿರುವ ವಾರಂಬಳ್ಳಿ ಪಂಚಾಯತ್ ಗೆ ಸೇರಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಇಂದು ಮುಂಜಾನೆ ನಡೆದಿದೆ.

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಘಟನೆಯಿಂದಾಗಿ ತ್ಯಾಜ್ಯ ಸಂಗ್ರಹ ವಾಹನವೊಂದು ಸ್ಫೋಟಗೊಂಡಿದೆ ಎನ್ನಲಾಗಿದೆ. ಬೆಂಕಿಯು ಕೆನ್ನಾಲಿಗೆಗೆ ಎಸ್.ಎಲ್.ಆರ್.ಎಂ. ಘಟಕ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಯಂತ್ರೋಪಕರಣಗಳು ಮತ್ತು ಉಪಕರಣಗಳಿಗೆ ಹಾನಿಯಾಗಿದೆ. ಮಲ್ಪೆ, ಉಡುಪಿ, ಕುಂದಾಪುರದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಮತ್ತು ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!