- Advertisement -
![]()
- Advertisement -
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಜು.13 ರಂದು ಬೆಳಗಿನ ಜಾವ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ.
ಜುಲೈ13 ರಂದು ಭಾನುವಾರ ಬೆಳಗ್ಗೆ ಉಪಹಾರ ತಯಾರಿಸಲು ಗ್ಯಾಸ್ ಉರಿಸಿದಾಗ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ತುಂಬಾ ಜನರಿದ್ದರು. ಮನೆಯವರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗಿಲ್ಲ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಲು ಸಹಕರಿಸಿದರು. ಮನೆಯ ಅಡುಗೆ ಕೋಣೆ ಸಂಪೂರ್ಣ ಸುಟ್ಟು ಹೋಗಿದ್ದು ವ್ಯಾಪಕ ಹಾನಿ ಸಂಭವಿಸಿದೆ.
- Advertisement -


