Saturday, June 6, 2026
Homeತಾಜಾ ಸುದ್ದಿಧಾರವಾಡ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ -ತಪ್ಪಿದ ದುರಂತ

ಧಾರವಾಡ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ -ತಪ್ಪಿದ ದುರಂತ

- Advertisement -
- Advertisement -

ಮಂಡ್ಯ: ಧಾರವಾಡ ಎಕ್ಸ್ ಪ್ರೆಸ್ ರೈಲಿನಲ್ಲಿ ಶನಿವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಪ್ರಯಾಣಿಕರು ಭಾರೀ ಅನಾಹುತದಿಂದ ಪಾರಾಗಿದ್ದಾರೆ.

ಮೈಸೂರಿನಿಂದ ಧಾರವಾಡಕ್ಕೆ ರಾತ್ರಿ 10.30 ಕ್ಕೆ ಈ ಎಕ್ಸ್ ಪ್ರೆಸ್ ರೈಲು ಹೊರಟಿತ್ತು. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದ ಬಳಿ ತಡರಾತ್ರಿ 12.30 ಕ್ಕೆ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ತತ್‌ಕ್ಷಣ ರೈಲನ್ನು ನಿಲ್ಲಿಸಲಾಗಿದೆ. ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಇದರಿಂದ ಸಂಭಾವ್ಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

- Advertisement -

Latest News

error: Content is protected !!