Sunday, May 5, 2024
Homeಕರಾವಳಿಮಂಗಳೂರಿನ ಉಳ್ಳಾಲದಲ್ಲಿ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಂಗಳೂರಿನ ಉಳ್ಳಾಲದಲ್ಲಿ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

spot_img
- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದಲ್ಲಿ ಬೀಫ್ ಸ್ಟಾಲೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಉಳ್ಳಾಲ ನಗರ ಸಭಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಬೀಫ್ ಸ್ಟಾಲಿಗೆ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ತೊಕ್ಕೊಟ್ಟು ಮಾರುಕಟ್ಟೆಯಲ್ಲಿ ಕಳೆದ 50 ವರ್ಷಗಳಿಂದ ಮಾಂಸ ವ್ಯಾಪಾರ ಮಾಡುತ್ತಿದ್ದ 4 ತಾತ್ಕಾಲಿಕ ಶೆಡ್ ಗೆ ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರಿಂದ ಅಲ್ಲಿರುವ ಸೊತ್ತುಗಳು ಸಂಪೂರ್ಣ ಸುಟ್ಟು ನಾಶವಾಗಿವೆ.

ಅಕ್ರಮ ಬೀಫ್ ಸ್ಟಾಲ್ ಎಂದು ಆರೋಪಿಸಿದ್ದ ಉಳ್ಳಾಲದ ಬಜರಂಗದಳ- ವಿಹಿಂಪ, ಅವುಗಳ ತೆರವಿಗೆ ಪೊಲೀಸ್ ಇಲಾಖೆ ಮತ್ತು ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ಮಾಡಿದ್ದವು. ಇದೀಗ ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಸ್ಥಳಕ್ಕೆ ಉಳ್ಳಾಲ ನಗರಸಭೆಯ ಅಧಿಕಾರಿಗಳು ಭೇಟಿ ನೀಡಿದ್ದು, ತಾತ್ಕಾಲಿಕ ಅಂಗಡಿ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದಾರೆ.

- Advertisement -
spot_img

Latest News

error: Content is protected !!