ಶ್ರೀನಗರ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ ನಡೆದಿದೆ. ಜಮ್ಮುವಿನ ಗ್ರೇಟರ್ ಕೈಲಾಶ್ ನಲ್ಲಿರುವ ರಾಯಲ್ ಪಾರ್ಕ್ ನಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದ ವೇಳೆ ದಾಳಿ ನಡೆಸಲಾಗಿದೆ.
ನಿನ್ನೆ ರಾತ್ರಿ ಗುಂಡಿನ ದಾಳಿ ನಡೆದಿದ್ದು, ಫಾರೂಕ್ ಅಬ್ದುಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಯನ್ನು ಸ್ಥಳದಲ್ಲೇ ಪೊಲೀಸರು ಬಂಧಿಸಿದ್ದಾರೆ.
ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ ವಿಚಾರವನ್ನು
ರಾಜ್ಯಸಭೆಯಲ್ಲಿ ಇಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪಿಸಿದ್ದು, ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡಿಲ್ಲ, ಕೇಂದ್ರ ಸರ್ಕಾರ ರಾಜ್ಯದ ಸ್ಥಾನಮಾನ ನೀಡದೇ ಹತ್ಯೆಗೆ ಸಂಚು ರೂಪಿಸಿದೆಯೇ ಎಂದು ಪ್ರಶ್ನಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪಕ್ಕೆ ರಾಜ್ಯಸಭೆಯಲ್ಲಿ ಉತ್ತರಿಸಿರುವ ಸಭಾ ನಾಯಕ ಜೆ.ಪಿ. ನಡ್ಡಾ, ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ವಿಷಯ ಪರಿಗಣಿಸಿದ್ದು ಸೂಕ್ತವಾದ ತನಿಖೆಯನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.


