Wednesday, June 3, 2026
Homeತಾಜಾ ಸುದ್ದಿಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ: ಪ್ರಮುಖ ಆರೋಪಿ ಮೇಲೆ ಫೈರಿಂಗ್

ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ: ಪ್ರಮುಖ ಆರೋಪಿ ಮೇಲೆ ಫೈರಿಂಗ್

- Advertisement -
- Advertisement -

ಶಿವಮೊಗ್ಗ : ನಿನ್ನೆ ಪ್ರೇಮ್ ಸಿಂಗ್ ಎಂಬಯುವಕನಿಗೆ ಚಾಕು ಇರಿದ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ನಿನ್ನೆ ತಡ ರಾತ್ರಿ ಪೊಲೀಸರು ಗುಂಡು ಹಾರಿಸಿದ್ದಾರೆ.

ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಮಾರ್ನಾಮಿಬೈಲ್ ನ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಶಿವಮೊಗ್ಗ ವಿನೋಬನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿರುವ ಮಂಜುನಾಥ್ ಕುರಿ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್ ನಲ್ಲಿ ಘಟನೆ ನಡೆದಿದ್ದು, ಸದ್ಯ ಆರೋಪಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ದೊಡ್ಡಪೇಟೆ ಪೊಲೀಸರು ಈಗಾಗಲೇ ಶಿವಮೊಗ್ಗ ಜೆಸಿ ನಗರದ ನದೀಮ್ (25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25) ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!