Saturday, June 27, 2026
Homeಇತರಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ

- Advertisement -
- Advertisement -

ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಸಚಿವ ಭೈರತಿ ಬಸವರಾಜ್ ಸಹಚರ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಬಾಬು ಮೇಲೆ ಗುಂಡಿನ ದಾಳಿ ನಡೆದಿದೆ. ನಗರದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಬಾಬು ಮೇಲೆ ಇಬ್ಬರು ಏಕಾಏಕಿ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯನ್ನು ತಪ್ಪಿಸಿಕೊಂಡ ಬಾಬು ಕೈಗೆ ಗಾಯವಾಗಿದೆ.ಗುಂಡು ಹಾರಿಸಿದಾಗ ತಪ್ಪಿಸಿಕೊಂಡ ಬಾಬು ಮೇಲೆ ಮಚ್ಚು ಲಾಂಗ್ ನಿಂದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ಶೂಟ್ ಮಾಡಿ ಅಲ್ಲಿಂದ ಎಸ್ಕೇಪ್ ಆಗಲ್ಲೂ ಯತ್ನಿಸಿದ ಆರೋಪಿಗಳನ್ನು ಸ್ಥಳೀಯರ ಸಹಾಯದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಉಳಿದಂತೆ ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಹಳೇ ದ್ವೇಷ ಹಿನ್ನಲೆ ಬಾಬು ಮೇಲೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಹಾಗೂ ವೈಟ್ ಫೀಲ್ಡ್ ಡಿಸಿಪಿ ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತನಿಖೆ ಮುಂದುವರೆದಿದೆ. ಬಾಬು ಕೆ.ಆರ್.ಪುರಂ ಶಾಸಕ ಹಾಗೂ ಸಚಿವ ಭೈರತಿ ಬಸವರಾಜ್ ಅವರಿಗೆ ಆಪ್ತ ಎನ್ನಲಾಗಿದೆ. ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಗೊಂಡಿರುವ ಬಾಬುಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

- Advertisement -

Latest News

error: Content is protected !!