- Advertisement -
- Advertisement -
ಸಾಂದರ್ಭಿಕ ಚಿತ್ರ
ಮಂಗಳೂರು, ಎ. 5: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಪ್ರಥಮ ಕೊರೋನ ವೈರಸ್ ಸೋಂಕಿತ ಭಟ್ಕಳದ ಯುವಕ ಸಂಪೂರ್ಣ ಚೇತರಿಸಿದ್ದು, ನಾಳೆ (ಎ.6ರಂದು) ಆತನನ್ನು ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮಾ.19ರಂದು ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಮಂಗಳೂರಿಗೆ ಬಂದಿದ್ದ ಭಟ್ಕಳದ ಸುಮಾರು 22 ವರ್ಷ ಪ್ರಾಯದ ಯುವಕನಿಗೆ ಮಾ.22ರಂದು ಕೊರೋನ ಸೋಂಕು ಇರುವುದು ದೃಢಪಟ್ಟಿತ್ತು.
ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತ 14 ದಿನಗಳ ನಿಗಾ ಅವಧಿ ಪೂರೈಸಿದ್ದು, ಆತನ ಗಂಟಲಿನ ದ್ರವದ ಮಾದರಿಯನ್ನು ಎ.2 ಮತ್ತು 3ರಂದು ಹೀಗೆ ಮತ್ತೆ 2 ಬಾರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಆತನ ದ್ರವದ ಮಾದರಿಯ ವರದಿಯು ನೆಗೆಟಿವ್ ಬಂದಿದೆ. ಹಾಗಾಗಿ ಆತನನ್ನು ಎ.6ರಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
- Advertisement -