- Advertisement -
![]()
- Advertisement -
ಕೊಡಗು : ಕೊಡಗಿನಲ್ಲೂ ಕೊರೊನಾದ ಆರ್ಭಟ ಜೋರಾಗಿದೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಇಲ್ಲಿ ಹೆಚ್ಚಾಗುತ್ತಿರೋದು ಆತಂಕಕ್ಕೆ ಕಾರಣವಾಗಿರುವಾಗಲೇ ಇವತ್ತು ಕೊಡಗಿನಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ.
ಕೊರೊನಾ ಸೋಂಕಿಗೆ ಒಳಗಾಗಿದ್ದ ಕುಶಾಲನಗರದ ದಂಡಿನಪೇಟೆಯ 58 ವರ್ಷದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆ ಇದ್ದುದರಿಂದ ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಅವರು ನಿನ್ನೆಯೇ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಸಂಜೆ ಮೃತಪಟ್ಟಿದ್ದಾರೆ.ಆ ಮೂಲಕ ಕೊರೊನಾಗೆ ಕೊಡಗಿನಲ್ಲಿ ಮೊದಲ ಬಲಿಯಾಗಿದೆ. ಇನ್ನು ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.
- Advertisement -


