Tuesday, August 25, 2026
Homeಕರಾವಳಿಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ: ಜುಲೈನಲ್ಲಿ ನಡೆಸಲು ಸರ್ಕಾರದ ಸಿದ್ಧತೆ

ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ: ಜುಲೈನಲ್ಲಿ ನಡೆಸಲು ಸರ್ಕಾರದ ಸಿದ್ಧತೆ

- Advertisement -
- Advertisement -

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಪೂರ್ಣ ಪ್ರಮಾಣದಲ್ಲಿ ವಿಸ್ತರಣೆಗೊಂಡ ಬಳಿಕ ತನ್ನ ಮೊದಲ ಸಚಿವ ಸಂಪುಟ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ವಿಧಾನ ಪರಿಷತ್ ಚುನಾವಣೆ ಮುಗಿದ ತಕ್ಷಣ, ಅಂದರೆ ಜೂನ್ ಕೊನೆಯ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಆ ನಂತರ ಜುಲೈ ತಿಂಗಳಲ್ಲಿ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಈ ಐತಿಹಾಸಿಕ ಸಭೆ ನಡೆಯುವುದು ಬಹುತೇಕ ಖಚಿತವಾಗಿದೆ. ಈ ಕುರಿತು ವಿಧಾನಸೌಧ ಸಚಿವಾಲಯದ ಅಧಿಕಾರಿಗಳು ಈಗಾಗಲೇ ಸಿದ್ಧತೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದ ಅವಧಿಯಲ್ಲೇ ರಾಜಧಾನಿ ಬೆಂಗಳೂರು ಮತ್ತು ಬೆಳಗಾವಿ ಹೊರತುಪಡಿಸಿ ಇತರ ಜಿಲ್ಲಾ ಕೇಂದ್ರಗಳಲ್ಲೂ ಸಂಪುಟ ಸಭೆ ನಡೆಸುವ ಬಗ್ಗೆ ಚರ್ಚೆ ನಡೆದಿತ್ತಾದರೂ ಅದು ಸಾಧ್ಯವಾಗಿರಲಿಲ್ಲ; ಆದರೆ ಪ್ರಸ್ತುತ ಯು.ಟಿ. ಖಾದರ್ ಅವರು ಸಚಿವರಾದ ಬೆನ್ನಲ್ಲೇ ಈ ಹಳೇ ಪ್ರಸ್ತಾಪಕ್ಕೆ ಮರುಜೀವ ಬಂದಿದ್ದು, ಕಡಲತೀರದ ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಗಂಭೀರ ನಿರ್ಧಾರ ಕೈಗೊಂಡಿದೆ.

- Advertisement -

Latest News

error: Content is protected !!