Thursday, June 4, 2026
Homeತಾಜಾ ಸುದ್ದಿಪ್ರಥಮ ಪಿಯುಸಿ ಪೂರಕ ಪರೀಕ್ಷೆಗೆ ದಿನಾಂಕ ನಿಗದಿ

ಪ್ರಥಮ ಪಿಯುಸಿ ಪೂರಕ ಪರೀಕ್ಷೆಗೆ ದಿನಾಂಕ ನಿಗದಿ

- Advertisement -
- Advertisement -

ಬೆಂಗಳೂರು: ಪ್ರಥಮ ಪಿಯುಸಿ ಪೂರಕ ಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಜುಲೈ 16 ರಿಂದ 27 ರವರೆಗೆ ಪರೀಕ್ಷೆಗಳು ನಡೆಯಲಿವೆ.

2019 -20 ನೇ ಸಾಲಿನಲ್ಲಿ ಅನುತ್ತೀರ್ಣರಾದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲಿ ಪೂರಕ ಪರೀಕ್ಷೆ ನಡೆಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಿದ ಮಾದರಿಯಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.

ಪರೀಕ್ಷಾ ಶುಲ್ಕ ಪಾವತಿ, ಪರೀಕ್ಷೆ ದಿನಾಂಕ ಪ್ರಕಟ, ನಿಯಮ ಪಾಲನೆ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪರೀಕ್ಷೆ ನಡೆಸಲು ತಿಳಿಸಲಾಗಿದೆ.

- Advertisement -

Latest News

error: Content is protected !!