Friday, June 5, 2026
Homeತಾಜಾ ಸುದ್ದಿಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು - ಫೇಲ್ ಆದ ಎಲ್ಲ ವಿದ್ಯಾರ್ಥಿಗಳೂ ಪಾಸ್

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು – ಫೇಲ್ ಆದ ಎಲ್ಲ ವಿದ್ಯಾರ್ಥಿಗಳೂ ಪಾಸ್

- Advertisement -
- Advertisement -

ಬೆಂಗಳೂರು: ಕೋವಿಡ್ ಸೊಂಕಿನ ಪ್ರಕರಣಗಳು ದಿನೇ ದಿನೇ ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜುಲೈ 16 ರಿಂದ 27ರವರೆಗೆ ನಿಗದಿಯಾಗಿದ್ದ ಪೂರಕ ಪರೀಕ್ಷೆಗಳನ್ನು ರದ್ದುಪಡಿಸಲು ಇಂದು ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸುಮಾರು 60 ಸಾವಿರ ವಿದ್ಯಾರ್ಥಿಗಳು ಈ ನಿರ್ಧಾರದ ಲಾಭ ಪಡೆಯಲಿದ್ದಾರೆ.

‘ಪರೀಕ್ಷೆಯಲ್ಲಿ ಉತ್ತೀರ್ಣತೆಯನ್ನು ಪಡೆಯಲು ಅವಶ್ಯಕತೆಯಿರುವ ಕನಿಷ್ಠ ಅಂಕಗಳನ್ನು ಕಾಲೇಜು ಹಂತದಲ್ಲಿಯೇ ನೀಡಲಾಗುವುದು. ಹಾಜರಾತಿ ಕೊರತೆಯಿಲ್ಲದ, ಅನಿವಾರ್ಯ ಸಂದರ್ಭದಲ್ಲಿ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳು ಪ್ರಾರಂಭವಾದ ಬಳಿಕ ದ್ವಿತೀಯ ಪಿಯುಸಿಯ ಪ್ರಥಮ ಕಿರುಪರೀಕ್ಷೆಗೂ ಪೂರ್ವದಲ್ಲಿ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣವಾದ ವಿಷಯಗಳಿಗೆ ಮತ್ತೊಮ್ಮೆ ಕಾಲೇಜು ಹಂತದಲ್ಲಿ ಕಿರುಪರೀಕ್ಷೆಯನ್ನು ನಡೆಸಿ ಅವರ ಕಲಿಕೆಯ ಮಟ್ಟವನ್ನು ಮೌಲ್ಯಮಾಪನ ಮಾಡಲಾಗುವುದೆಂದು ಸಚಿವರು ಹೇಳಿದ್ದಾರೆ.

- Advertisement -

Latest News

error: Content is protected !!