Thursday, June 4, 2026
Homeಕರಾವಳಿಉಡುಪಿಇಂದು ಮೊದಲ ಬಾರಿಗೆ ಶ್ರೀ ಕಾಶೀ ಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರು ಶ್ರೀ...

ಇಂದು ಮೊದಲ ಬಾರಿಗೆ ಶ್ರೀ ಕಾಶೀ ಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠಕ್ಕೆ ಆಗಮನ !

- Advertisement -
- Advertisement -

ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶ್ರೀ ಕಾಶೀ ಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆಯಲಿದ್ದಾರೆ.

ಶ್ರೀಸಂಯಮೀಂದ್ರ ತೀರ್ಥ ಶ್ರೀಪಾದರು ಇದೇ ಮೊದಲ ಬಾರಿಗೆ ಶ್ರೀ ಕೃಷ್ಣ ಮಠಕ್ಕೆ ಆಗಮಿಸುತ್ತಿದ್ದು ಅವರನ್ನು ಸಂಸ್ಕೃತ ಕಾಲೇಜಿನ ವೃತ್ತದ ಬಳಿ ಅಪರಾಹ್ನ 3.30 ಕ್ಕೆ ಸ್ವಾಗತಿಸಲಾಗುವುದು.

ಪರ್ಯಾಯ ಶ್ರೀಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶ್ರೀ ಕೃಷ್ಣ ದೇವರ ದರ್ಶನ ಮಾಡಿಸಿ ಗೌರವಿಸಿದ ಬಳಿಕ ಸಂಜೆ 4.00 ಗಂಟೆಗೆ ರಾಜಾಂಗಣದಲ್ಲಿ ನಡೆಯುವ ಅದಮಾರು ಪರ್ಯಾಯದ ಮಂಗಲೋತ್ಸವ ‘ವಿಶ್ವಾರ್ಪಣಮ್’ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ಪಾಲ್ಗೊಂಡು ಸಂದೇಶ ನೀಡಲಿದ್ದಾರೆ .

- Advertisement -

Latest News

error: Content is protected !!