- Advertisement -
![]()
- Advertisement -
ಮಂಗಳೂರು: ಇಲ್ಲಿನ ಪಂಪ್ ವೆಲ್ ಬಳಿ ಮೀನು ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಗುಂಪನ್ನು ಬಜರಂಗದಳದ ಕಾರ್ಯಕರ್ತರು ಅಡ್ಡಗಟ್ಟಿ ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಟ್ರಕ್ ನಲ್ಲಿ ಕೇರಳದಿಂದ ಮಂಗಳೂರಿಗೆ ಸುಮಾರು 10 ಟನ್ ಗೋ ಮಾಂಸವನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ವರದಿಯಾಗಿದೆ. ಮಾಂಸವನ್ನು ವಶಕ್ಕೆ ಪಡೆಯಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕಂಕನಾಡಿ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
- Advertisement -


