Friday, June 5, 2026
Homeಕರಾವಳಿಉಡುಪಿಉಡುಪಿ; ಅಲೆಯ ಹೊಡೆತಕ್ಕೆ ಸಿಕ್ಕಿ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

ಉಡುಪಿ; ಅಲೆಯ ಹೊಡೆತಕ್ಕೆ ಸಿಕ್ಕಿ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

- Advertisement -
- Advertisement -

ಉಡುಪಿ;: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರರೊಬ್ಬರು ಅಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಉಪ್ಪುಂದ ಗ್ರಾಮದ ಮಡಿಕಲ್ ಜಟ್ಟಿಯಲ್ಲಿ ನಡೆದಿದೆ.

ನಾಗರಾಜ (43) ಮೃತ ದುರ್ದೈವಿ. ನಾಗರಾಜ್  ಇತರ ಮೀನುಗಾರರೊಂದಿಗೆ ದೋಣಿಯಲ್ಲಿ ಮೀನುಗಾರಿಕೆಗೆಂದು ಮಡಿಕಲ್ ಜಟ್ಟಿಯಿಂದ ತೆರಳಿದ್ದು, 12 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಂಜೆ 4:00ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ದೋಣಿಯಲ್ಲಿದ್ದವರು ತಕ್ಷಣ ನಾಗರಾಜರನ್ನು ನೀರಿನಿಂದ ಮೇಲಕ್ಕೆತ್ತಿ ಉಪಚರಿಸಿ 108 ಅಂಬುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ ಸೇರಿಸಿ ಬಳಿಕ ಅಲ್ಲಿಂದ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ನಾಗರಾಜ್ ರಾತ್ರಿ 9:30ರ ಸುಮಾರಿಗೆ ಮೃತಪಟ್ಟಿದ್ದಾರೆ.. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!