Thursday, June 4, 2026
Homeಕರಾವಳಿಉಳ್ಳಾಲ ಸಮುದ್ರದಲ್ಲಿ ವಿದೇಶಿ ಹಡಗು ಮುಳುಗಡೆ ಹಿನ್ನೆಲೆ: ಉಳ್ಳಾಲ ವಲಯದ ಸುತ್ತಮುತ್ತ ಮೀನುಗಾರಿಕೆ ನಿಷೇಧ

ಉಳ್ಳಾಲ ಸಮುದ್ರದಲ್ಲಿ ವಿದೇಶಿ ಹಡಗು ಮುಳುಗಡೆ ಹಿನ್ನೆಲೆ: ಉಳ್ಳಾಲ ವಲಯದ ಸುತ್ತಮುತ್ತ ಮೀನುಗಾರಿಕೆ ನಿಷೇಧ

- Advertisement -
- Advertisement -

ಮಂಗಳೂರು: ಉಳ್ಳಾಲ ಸಮುದ್ರದಲ್ಲಿ ವಿದೇಶಿ ಹಡಗು ಮುಳುಗಡೆಯಾಗಿರುವ ಹಿನ್ನಲೆಯಲ್ಲಿ ಉಳ್ಳಾಲ ವಲಯದ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಿಂದ ಮೀನುಗಾರಿಕೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆಯಾಗುತ್ತಿರುವ ಕಾರಣದಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ.

ಇಂದು ವೇಳೆ ಆದೇಶ ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ಮೀನುಗಾರಿಕೆ ಇಲಾಖೆ ನೀಡಿದೆ.

ಮಂಗಳೂರಿನ ಉಚ್ಚಿಲ ಬಟ್ಟಪಾಡಿ ಕಡಲ ತೀರದಲ್ಲಿ ‌ಜೂನ್ 23 ರಂದು ಸಿರಿಯಾ ದೇಶದ ಎಂ.ಬಿ.ಪ್ರಿನ್ಸೆಸ್ ಮಿರಲ್ ವ್ಯಾಪಾರಿ ಹಡಗು ಚೀನಾದಿಂದ ಲೆಬನಾನ್ ಗೆ  8 ಸಾವಿರ ಟನ್ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ವೇಳೆ ತಾಂತ್ರಿಕ ಕಾರಣದಿಂದ ಮಂಗಳೂರು ಸಮುದ್ರದಲ್ಲಿ ಮುಳುಗಡೆಯಾಗಿತ್ತು.

- Advertisement -

Latest News

error: Content is protected !!