Thursday, June 4, 2026
Homeಕರಾವಳಿಉಡುಪಿಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಬೆಂಕಿಗಾಹುತಿ

ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಬೆಂಕಿಗಾಹುತಿ

- Advertisement -
- Advertisement -

ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಬೆಂಕಿಗಾಹುತಿಯಾಗಿದೆ. ಬಾಪುತೋಟ ಬಳಿಯ ಮೀನುಗಾರಿಕೆ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕೆ ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.

ಮಲ್ಪೆಯ ಜನಾರ್ದನ ಟಿ. ಕಾಂಚನ್ ಅವರಿಗೆ ಸೇರಿದ ರವಿಪ್ರಕಾಶ್ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯ ದೋಣಿಯವರು ಗಮನಿಸಿ ಸಕಾಲದಲ್ಲಿ ಮಾಹಿತಿ ನೀಡಿದ್ದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ. ಅಂದು ಬೋಟಿನ ಮೀನುಗಾರರು ಮೀನುಗಾರಿಕೆ ಮುಗಿಸಿ ಬೋಟನ್ನು ಬಾಪು ತೋಟದ ಬಳಿಯ ದಕ್ಕೆಯಲ್ಲಿ ನಿಲ್ಲಿಸಿದ್ದರು.

ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ಬೋಟಿನ ಸುತ್ತ ಸುಮಾರು 25ರಿಂದ 30 ಬೋಟುಗಳು ಇದ್ದರೂ ಸಮುದ್ರದ ನೀರಿನ ಉಬ್ಬರದಿಂದಾಗಿ ಇತರ ಯಾವುದೇ ಬೋಟಿಗೆ ಬೆಂಕಿ ತಗುಲಲಿಲ್ಲ ಎನ್ನಲಾಗಿದೆ.

- Advertisement -

Latest News

error: Content is protected !!