Saturday, May 18, 2024
Homeಕರಾವಳಿಉಡುಪಿಮಂಗಳೂರು : ಕರಾವಳಿಯಲ್ಲಿ 'ಕಿಯೋನಿಕ್ಸ್ ವತಿಯಿಂದ ಸಾಫ್ಟ್ ವೇರ್ ಪಾರ್ಕ್ ಸ್ಥಾಪನೆ'; ಸಚಿವ ಅಶ್ವತ್ಥನಾರಾಯಣ

ಮಂಗಳೂರು : ಕರಾವಳಿಯಲ್ಲಿ ‘ಕಿಯೋನಿಕ್ಸ್ ವತಿಯಿಂದ ಸಾಫ್ಟ್ ವೇರ್ ಪಾರ್ಕ್ ಸ್ಥಾಪನೆ’; ಸಚಿವ ಅಶ್ವತ್ಥನಾರಾಯಣ

spot_img
- Advertisement -
- Advertisement -

ಮಂಗಳೂರು : ರಾಜ್ಯದ ಕರಾವಳಿಯಲ್ಲಿ ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ಮೀನುಗಾರಿಕೆಯನ್ನು ದೊಡ್ಡ ಆದಾಯದ ಮೂಲವನ್ನಾಗಿ ಬೆಳೆಸಲಾಗುವುದು ಮತ್ತು ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಶುಕ್ರವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಬಿಯಾಂಡ್ ಬೆಂಗಳೂರು ಉಪಕ್ರಮದಡಿ ಹಮ್ಮಿಕೊಂಡಿದ್ದ ಒಂದು ದಿನದ ಮಂಗಳೂರು ಟೆಕ್ನೋವಾಂಜಾ ಸಮಾವೇಶದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡವೂ ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಅಪಾರವಾದ ಮತ್ಸ್ಯ ಸಂಪತ್ತಿದೆ. ಸರಕಾರವು ಜೈವಿಕ ಸಂಪನ್ಮೂಲಗಳನ್ನು ಆಧರಿಸಿದ ಆರ್ಥಿಕ ಮೂಲಗಳಲ್ಲಿ (ಬಯೊನಾಮಿಕ್ಸ್) ಗುರುತಿಸಿರುವ ಆದಾಯದ ಐದು ಶಕ್ತಿಗಳಲ್ಲಿ ಮೀನುಗಾರಿಕೆಯೂ ಒಂದಾಗಿದೆ. ಇದನ್ನು ಆದಾಯದ ದೊಡ್ಡ ವಲಯವಾಗಿ ಬೆಳೆಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ ಹೇಳಿದರು.

ಇದಲ್ಲದೆ, ಕಿಯೋನಿಕ್ಸ್ ವತಿಯಿಂದ ಮಂಗಳೂರಿನಲ್ಲಿ ಸಾಫ್ಟ್‍ವೇರ್ ಪಾರ್ಕನ್ನು ಸ್ಥಾಪಿಸಲಾಗುವುದು. ಇದಕ್ಕೆ ಬೇಕಾದ ತಾಂತ್ರಿಕ ಅನುಮತಿ ಈಗಾಗಲೇ ಸಿಕ್ಕಿದ್ದು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಡಿಯಲ್ಲಿ ಎಲಿವೇಟ್’ ಕಾರ್ಯಕ್ರಮದ ಅನ್ವಯ ಮಂಗಳೂರು ಕ್ಲಸ್ಟರ್ ಗೆ ವಿಶೇಷ ನಿಧಿಯನ್ನು ಕೊಡಲಾಗುವುದು. ಜತೆಗೆ, ಮಂಗಳೂರಿನಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಆರ್ಥಿಕ ಸೇವೆಗಳನ್ನು (ಫಿನ್-ಟೆಕ್) ಒದಗಿಸುವ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಸಚಿವರು ಘೋಷಿಸಿದರು.

- Advertisement -
spot_img

Latest News

error: Content is protected !!