Thursday, June 4, 2026
Homeಕರಾವಳಿಐದು ದಿನಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ; ರೆಡ್ ಅಲರ್ಟ್ ಘೋಷಣೆ

ಐದು ದಿನಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ; ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಐದು ದಿನ ಕರಾವಳಿ ಮತ್ತು ಮಲೆನಾಡಿನ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ಮಳೆಯಿಂದಾಗಿ ಉತ್ತರ ಕನ್ನಡ ದಕ್ಷಿಣ ಕನ್ನಡ ಮಂಗಳೂರು ಉಡುಪಿ ಸೇರಿಯಂತೆ ಸಾಕಷ್ಟು ಅನಾಹುತಗಳಾಗಿದ್ದು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಹೀಗಾಗಿ ಇಂದು ಸೇರಿದಂತೆ ಐದು ದಿನ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹೈಅಲರ್ಟ್ ಮುಂದುವರೆಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಲಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 40 ರಿಂದ 50 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಹಮಾಮಾನ ಇಲಾಖೆ ತಿಳಿಸಿದೆ

- Advertisement -

Latest News

error: Content is protected !!