Thursday, June 4, 2026
Homeಕರಾವಳಿಉಡುಪಿಉಡುಪಿ: ನಾಲ್ವರ ಕೊಲೆ ಪ್ರಕರಣ : ಡಿವೈಎಸ್ಪಿ ನೇತೃತ್ವದಲ್ಲಿ ಐದು ತನಿಖಾ ತಂಡ ರಚನೆ

ಉಡುಪಿ: ನಾಲ್ವರ ಕೊಲೆ ಪ್ರಕರಣ : ಡಿವೈಎಸ್ಪಿ ನೇತೃತ್ವದಲ್ಲಿ ಐದು ತನಿಖಾ ತಂಡ ರಚನೆ

- Advertisement -
- Advertisement -

ಉಡುಪಿ: ತೃಪ್ತಿ ನಗರದಲ್ಲಿ ನಿನ್ನೆ ನಡೆದಿರುವ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪತ್ತೆಗೆ ಐದು ತನಿಖಾ ತಂಡಗಳನ್ನು ಪೊಲೀಸ್ ಇಲಾಖೆ ರಚಿಸಿದೆ.

ಡಿವೈಎಸ್ಪಿ ನೇತೃತ್ವದಲ್ಲಿ ಐದು ತನಿಖಾ ತಂಡಗಳನ್ನು ರಚನೆ ಮಾಡಲಾಗಿದ್ದು, ಮಂಗಳೂರು, ಶಿವಮೊಗ್ಗ, ಕಾರವಾರದಲ್ಲಿ ತಲಾ ಒಂದು ತಂಡ ಮತ್ತು ಉಡುಪಿಯಲ್ಲಿ ಎರಡು ತಂಡಗಳಿಂದ ತನಿಖೆ ನಡೆಯಲಿದೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ನಿನ್ನೆ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು ಎಂದು ಹೇಳಲಾಗಿದೆ.

ನಿನ್ನೆ ಬೆಳಗ್ಗೆ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ತಾಯಿ‌ ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿತ್ತು.

- Advertisement -

Latest News

error: Content is protected !!