Tuesday, July 14, 2026
Homeಕರಾವಳಿಉಡುಪಿಉಡುಪಿ:ಒಂದೇ ಸ್ಕೂಟರ್ ನಲ್ಲಿ 5 ಮಂದಿ ವಿದ್ಯಾರ್ಥಿಗಳು ಪ್ರಯಾಣ; ಚೆನ್ನಾಗಿಯೇ ಬಿಸಿ ಮುಟ್ಟಿಸಿದ ಪೊಲೀಸರು

ಉಡುಪಿ:ಒಂದೇ ಸ್ಕೂಟರ್ ನಲ್ಲಿ 5 ಮಂದಿ ವಿದ್ಯಾರ್ಥಿಗಳು ಪ್ರಯಾಣ; ಚೆನ್ನಾಗಿಯೇ ಬಿಸಿ ಮುಟ್ಟಿಸಿದ ಪೊಲೀಸರು

- Advertisement -
- Advertisement -

ಉಡುಪಿ: ಒಂದೇ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ 5 ಮಂದಿ ವಿದ್ಯಾರ್ಥಿಗಳಿಗೆ ಪೊಲೀಸರು ಚೆನ್ನಾಗಿಯೇ ಬಿಸಿ ಮುಟ್ಟಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ.

ದಿನಾಂಕ 17.04.2025 ರಾತ್ರಿ ಸಮಯ ಮಣಿಪಾಲ ಸರಹದ್ದಿನಲ್ಲಿ ಓರ್ವ ಸ್ಕೂಟರ್ ಚಾಲಕನು ನಾಲ್ಕು ಜನ ಸಹ ಸವಾರರನ್ನು ಸ್ಕೂಟರ್ನಲ್ಲಿ ಕುಳ್ಳಿರಿಸಿಕೊಂಡು ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ಸವಾರಿ ಮಾಡಿಕೊಂಡು ಹೋದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು. ಈ ದಿನ ಈ ಸ್ಕೂಟರ್ ಸವಾರರನ್ನು ಮತ್ತು ಸ್ಕೂಟರನ್ನು ಪತ್ತೆಹಚ್ಚಲಾಗಿದ್ದು ಸದ್ರಿ ಸ್ಕೂಟರ್ ಸವಾರರು ಮಣಿಪಾಲದ ಮಾಹೆಯ ಇಬ್ಬರು ವಿದ್ಯಾರ್ಥಿಗಳು ಮತ್ತು ಮೂವರು ಮೈನರ್ ವಿದ್ಯಾರ್ಥಿಗಳಾಗಿರುವುದು ತಿಳಿದು ಬಂದಿರುತ್ತದೆ. ಸ್ಕೂಟರ್ ಚಾಲನೆ ಮಾಡುತ್ತಿದ್ದ ಸವಾರನಿಗೆ ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಅಪಾಯಕಾರಿಯಾಗಿ ವಾಹನ ಚಾಲನೆ ಮಾಡಿದ ತಪ್ಪಿಗಾಗಿ ರೂ. 10,500/- ದಂಡ ವಿಧಿಸಲಾಗಿದೆ.

- Advertisement -

Latest News

error: Content is protected !!